ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಾಂಗ್ರೆಸ್‌ನಿಂದ ಬ್ರಾಹ್ಮಣ ಅಭ್ಯರ್ಥಿ ಘೋಷಿಸುವ ಸಾಧ್ಯತೆ !

ಜಾತಿ ರಾಜಕಾರಣದಲ್ಲಿ ಸಿಲುಕಿರುವ ರಾಜಕಾರಣದಿಂದಾಗಿ ನಿರರ್ಥಕವಾಗಿರುವ ಪ್ರಜಾಪ್ರಭುತ್ವ !
ನವ ದೆಹಲಿ : ಆಸ್ಸಾಂ, ಬಂಗಾಲ, ತಮಿಳುನಾಡು, ಪುದುಚೇರಿ ಮತ್ತು ಕೇರಳ ಈ ರಾಜ್ಯಗಳ ವಿಧಾನಸಭೆ ಚುನಾವಣೆಯನ್ನು ಮೇ ೧೯ರಂದು ಘೋಷಿಸಿದ ಬಳಿಕ ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷವು ಬಹುದೊಡ್ಡ ಪ್ರಮಾಣದಲ್ಲಿ ಬದಲಾವಣೆ ಮಾಡಿದೆ.
ಆ ರಾಜ್ಯದಲ್ಲಿ ಮುಂದಿನ ವರ್ಷ ಜರುಗಲಿರುವ ವಿಧಾನಸಭೆಯ ಚುನಾವಣೆಯಲ್ಲಿ ಪಕ್ಷದಲ್ಲಿರುವ ಬ್ರಾಹ್ಮಣ ಮುಖಂಡರನ್ನು ಮುಖ್ಯಮಂತ್ರಿ ಹುದ್ದೆಯ ಅಭ್ಯರ್ಥಿಯೆಂದು ಘೋಷಿಸುವ ಸಾಧ್ಯತೆಗಳಿವೆ. ಅದಕ್ಕನುಗುಣವಾಗಿ ಪ್ರದೇಶಾಧ್ಯಕ್ಷ, ಕಾಂಗ್ರೆಸ್ಸಿನ ಕಾರ್ಯಕಾರಿಣಿ ಮುಖಂಡರು ಮತ್ತು ಆ ರಾಜ್ಯದ ರಾಷ್ಟ್ರೀಯ ಕಾರ್ಯಕಾರಿಣಿಯ ಜವಾಬ್ದಾರಿಯನ್ನು ವಹಿಸಿಕೊಂಡಿರುವವರ ಬದಲಾವಣೆಯಾಗಲಿದೆ, ಎಂದು ಹೇಳಲಾಗುತ್ತಿದೆ.

No comments:

Post a Comment

ಈ ಮಾಹಿತಿಯನ್ನು ಇತರರೊಂದಿಗೆ ಹಂಚಿ !
ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಾಂಗ್ರೆಸ್‌ನಿಂದ ಬ್ರಾಹ್ಮಣ ಅಭ್ಯರ್ಥಿ ಘೋಷಿಸುವ ಸಾಧ್ಯತೆ !