ದೂರ್ವೆ

ಗಣೇಶನ ಪೂಜೆಯಲ್ಲಿ ದೂರ್ವೆಗೆ (ಗರಿಕೆ) ವಿಶೇಷ ಮಹತ್ವವಿದೆ.
ವ್ಯುತ್ಪತ್ತಿ ಮತ್ತು ಅರ್ಥ
ದೂಃ+ಅವಮ್, ಹೀಗೆ ದೂರ್ವೆ ಈ ಶಬ್ದವು ನಿರ್ಮಾಣವಾಗಿದೆ. ‘ದೂಃ’ ಅಂದರೆ ದೂರದಲ್ಲಿ ಇರುವುದು ಮತ್ತು ‘ಅವಮ್’ ಅಂದರೆ ಯಾವುದು ಹತ್ತಿರ ತರುತ್ತದೆಯೋ ಅದು. ದೂರದಲ್ಲಿರುವ ಶ್ರೀ ಗಣೇಶನ ಪವಿತ್ರಕಗಳನ್ನು ಯಾವುದು ಹತ್ತಿರ ತರುತ್ತದೆಯೋ, ಅದುವೇ ದೂರ್ವೆ ಆಗಿದೆ.
ದೂರ್ವೆ ಹೇಗಿರಬೇಕು?
ಗಣಪತಿಗೆ ಎಳೆಯ ದೂರ್ವೆಗಳನ್ನು ಅರ್ಪಿಸಬೇಕು. ಎಳೆಯ ದೂರ್ವೆಗೆ ‘ಬಾಲತೃಣಮ್’ ಎನ್ನುತ್ತಾರೆ. ಬಲಿತಿರುವ ದೂರ್ವೆಯು ಒಂದು ರೀತಿಯ ಹುಲ್ಲಿ ನಂತೆಯೇ ಇರುತ್ತದೆ. ದೂರ್ವೆಗಳಿಗೆ ೩, , ೭ ಹೀಗೆ ಬೆಸ ಸಂಖ್ಯೆಯ ಗರಿಗಳಿರಬೇಕು.

ದೂರ್ವೆಯು ಎಷ್ಟು ಉದ್ದವಾಗಿರಬೇಕು?
ಮೊದಲು ಗಣಪತಿಯ ಮೂರ್ತಿ ಸುಮಾರು ಒಂದು ಮೀಟರಿನಷ್ಟು ಎತ್ತರವಾಗಿರುತ್ತಿತ್ತು. ಆದುದರಿಂದ ಸಮಿತ್ತಿನಷ್ಟು ಉದ್ದದ ದೂರ್ವೆಗಳನ್ನು ಅರ್ಪಿಸುತ್ತಿದ್ದರು. ಮೂರ್ತಿಯೇ ಸಮಿತ್ತುಗಳ ಆಕಾರದಷ್ಟು ಇದ್ದರೆ ಚಿಕ್ಕ ಆಕಾರದ ದೂರ್ವೆಗಳನ್ನು ಅರ್ಪಿಸಬೇಕು; ಮತ್ತು ಮೂರ್ತಿಯು ತುಂಬಾ ದೊಡ್ಡ ದಾಗಿದ್ದರೂ ಸಮಿತ್ತಿನ ಆಕಾರದ ದೂರ್ವೆ ಗಳನ್ನೇ ಅರ್ಪಿಸಬೇಕು. ಸಮಿತ್ತುಗಳನ್ನು ಒಟ್ಟಿಗೆ ಕಟ್ಟುವಂತೆ ದೂರ್ವೆಗಳನ್ನೂ ಒಟ್ಟಿಗೆ ಕಟ್ಟುತ್ತಾರೆ. ದೂರ್ವೆಗಳನ್ನು ಒಟ್ಟಿಗೆ ಕಟ್ಟುವುದರಿಂದ ಅವುಗಳ ಸುಗಂಧವು ಹೆಚ್ಚು ಸಮಯ ಉಳಿಯುತ್ತದೆ. ಅವು ಹೆಚ್ಚು ಸಮಯ ತಾಜಾ ಆಗಿರಬೇಕೆಂದು ಅವುಗಳನ್ನು ನೀರಿನಲ್ಲಿ ಅದ್ದಿ ಅರ್ಪಿಸುತ್ತಾರೆ. ಇವುಗಳಿಂದ ಗಣಪತಿಯ ಪವಿತ್ರಕಗಳು ಹೆಚ್ಚು ಕಾಲ ಮೂರ್ತಿಯಲ್ಲಿ ಉಳಿಯುತ್ತವೆ.
ದೂರ್ವೆಗಳ ಸಂಖ್ಯೆ ಎಷ್ಟಿರಬೇಕು?
ಬೆಸ ಸಂಖ್ಯೆಗಳು ಶಕ್ತಿಗೆ ಸಂಬಂಧಿ ಸಿರುತ್ತವೆ. ದೂರ್ವೆಗಳನ್ನು ಹೆಚ್ಚಾಗಿ ಬೆಸ ಸಂಖ್ಯೆಗಳಲ್ಲಿ (ಕನಿಷ್ಠ ೩ ಅಥವಾ ೫, , ೨೧ ಇತ್ಯಾದಿ) ಅರ್ಪಿಸುತ್ತಾರೆ. ಬೆಸ ಸಂಖ್ಯೆಗಳಿಂದ ಮೂರ್ತಿಯಲ್ಲಿ ಶಕ್ತಿಯು ಹೆಚ್ಚು ಪ್ರಮಾಣದಲ್ಲಿ ಬರುತ್ತದೆ. ಗಣಪತಿಗೆ ವಿಶೇಷವಾಗಿ ೨೧ ದೂರ್ವೆಗಳನ್ನು ಅರ್ಪಿಸುತ್ತಾರೆ. ೨೧ ಈ ಸಂಖ್ಯೆಯು ಸಂಖ್ಯಾಶಾಸ್ತ್ರಕ್ಕನುಸಾರ ೨+=೩ ಹೀಗೆ ಆಗಿದೆ. ಶ್ರೀ ಗಣಪತಿಯು ‘೩’ ಈ ಸಂಖ್ಯೆಗೆ ಸಂಬಂಧಿಸಿದ್ದಾನೆ. ‘೩’ ಈ ಸಂಖ್ಯೆಯು ಕರ್ತ, ಧರ್ತದೊಂದಿಗೆ ಹರ್ತವೂ ಆಗಿರುವುದರಿಂದ ಈ ಶಕ್ತಿಯಿಂದ ೩೬೦ ಲಹರಿಗಳನ್ನು ನಾಶ ಮಾಡಲು ಸಾಧ್ಯವಾಗುತ್ತದೆ. ಸಮ ಸಂಖ್ಯೆಗಳಲ್ಲಿ ದೂರ್ವೆಗಳನ್ನು ಅರ್ಪಿಸಿದರೆ ೩೬೦ ಲಹರಿಗಳು ಹೆಚ್ಚಿಗೆ ಆಕರ್ಷಿತವಾಗುತ್ತವೆ ಮತ್ತು ನಂತರ ೧೦೮ ಲಹರಿಗಳೂ ಆಕರ್ಷಿತವಾಗುತ್ತವೆ.

No comments:

Post a Comment

ಈ ಮಾಹಿತಿಯನ್ನು ಇತರರೊಂದಿಗೆ ಹಂಚಿ !
ದೂರ್ವೆ