ಸ್ಕಂದಮಾತೆ

ಭಗಃ’ ಎಂದರೆ ತೇಜಸ್ಸು. ‘ಭಗವತಿ’ ಎಂದರೆ ‘ವಿಶಿಷ್ಟ ಯೋಗ್ಯತೆಯುಳ್ಳ ಸ್ಪಂದನ ಲಹರಿಗಳಿಂದ ಯುಕ್ತವಾದಂತಹ ತೇಜಸ್ಸು’. ಬ್ರಹ್ಮದೇವ ಮತ್ತು ಭಗವತಿ ದೇವಿಯ ಸಮ್ಮಿಲಿತ ಅವಸ್ಥೆಯಿಂದ ಸನತ್ಕುಮಾರ ಅಥವಾ ಸ್ಕಂದ ಎಂಬ ಹೆಸರಿನ ವಿಶಿಷ್ಟ ರಚನೆಯ ಕಿರಣ ಸಮೂಹವು ಉತ್ಪನ್ನವಾಯಿತು. ಭೂಲೋಕದಿಂದ ಸತ್ಯಲೋಕದ ವರೆಗಿನ ಲೋಕಗಳನ್ನು ‘ಸ್ಕಂದರೇಷೆ’ ಎನ್ನುತ್ತಾರೆ.
ಭೂಲೋಕದಿಂದ ಸತ್ಯಲೋಕದವರೆಗಿನ ವ್ಯಾಹ್ಯತಿಗಳ ಮೇಲೆ ಸ್ಕಂದರೇಷೆಯ ನಿಯಂತ್ರಣವಿದೆ. ವ್ಯಾಹ್ಯತಿ ಅಂದರೆ ಗೂಢ ಸ್ವರ ಅಥವಾ ಮಂತ್ರ. ಸಪ್ತಲೋಕಗಳ ಹೆಸರುಗಳಂತೆ ಅನುಕ್ರಮವಾಗಿ ‘ಭೂಃ’, ‘ಭುವಃ’, ‘ಸ್ವಃ’, ‘ಮಹಃ’, ‘ಜನಃ’, ‘ತಪಃ’ ಮತ್ತು ‘ಸತ್ಯಮ್’ ಇವು ಏಳು ವ್ಯಾಹ್ಯತಿಗಳಾಗಿವೆ. ಈ ಏಳೂ ಲೋಕಗಳ ನಿಯಂತ್ರಕರ ಮಾತೆಯೇ ಸ್ಕಂದಮಾತೆ. ಈ ಏಳೂ ಲೋಕಗಳಿಂದ ಪಾರಾಗಿ ಹೋಗಲು ಯಾರ ಸಹಾಯ ಬೇಕಾಗುತ್ತದೆಯೋ ಅವಳಿಗೆ ಸ್ಕಂದಮಾತೆ ಎನ್ನುತ್ತಾರೆ.

No comments:

Post a Comment

ಈ ಮಾಹಿತಿಯನ್ನು ಇತರರೊಂದಿಗೆ ಹಂಚಿ !
ಸ್ಕಂದಮಾತೆ